Banner Ad

ಸುದ್ದಿ ಕನ್ನಡ ವಾರ್ತೆ
ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಯಲ್ಲಿ ಟಾಸ್ಕ್ ವೇಳೆ ನಟಿ ಸಂಗೀತ ಭಟ್ ರವರು ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ.

ನಿರ್ದೇಶಕ ಓಂ ಪ್ರಕಾಶ್ ರಾವ್ ರವರ ಆರೋಗ್ಯದಲ್ಲಿಯೂ ಏರುಪೇರಾದ ಹಿನ್ನೆಲೆಯಲ್ಲಿ ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಯಿಂದ ಓಂ ಪ್ರಕಾಶ್ ಹೊರಬಂದಿದ್ದರು. ಇದೀಗ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ. ಬಿಗ್ ಬಾಸ್ ಸ್ಪರ್ಧಿ ನಟಿ ಸಂಗೀತ ಭಟ್ ರವರ ಆರೋಗ್ಯದಲ್ಲಿಯೂ ದಿಡೀರ್ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Banner Ad

ಬಿಗ್ ಬಾಸ್ ರವರು ಗಂಧರ್ವರು ಮತ್ತು ರಾಕ್ಷಸರು ಎಂಬ ಟಾಸ್ಕ್ ಕೊಟ್ಟಿದ್ದರು. ಈ ಟಾಸ್ಕ್ ವೇಳೆ ಸಂಗೀತ ಭಟ್ಟರವರು ಏಕಾಏಕಿ ಕುಸಿದು ಬಿದ್ದು ಅಸ್ವಸ್ಥಗೊಂಡರು ಎನ್ನಲಾಗಿದೆ. ಈ ಟಾಸ್ಕ್ ನಲ್ಲಿ ಸಂಗೀತ ಭಟ್ ರವರು ರಾಕ್ಷಸರ ತಂಡದಲ್ಲಿದ್ದರು.

ಸಂಗೀತ ಭಟ್ರು ಅವರಿಗೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಕನ್ಫೆಷನ್ ರೂಮ್ಗೆ ಕರೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸದ್ಯ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಲೈವ್ ನಲ್ಲಿ ಸಂಗೀತ ಭಟ್ ರವರು ಕಾಣಿಸುತ್ತಿಲ್ಲ. ಇದರಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಯೇ ….? ಅವರು ವಾಪಸ್ ಬಿಗ್ ಬಾಸ್ ಮನೆಗೆ ಬರಲಿದ್ದಾರಾ..? ಎಂದು ಬಿಗ್ ಬಾಸ್ ವೀಕ್ಷಕರು ಪ್ರಶ್ನೆ ಕೇಳುತ್ತಿದ್ದಾರೆ

Banner Ad