ಸುದ್ದಿ ಕನ್ನಡ ವಾರ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇಂದು ಮೌನಿ ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು ಕಾಲ್ತುಳಿತ ಉಂಟಾಗಿದೆ .

ಪ್ರಯಾಗ್ ರಾಜನಲ್ಲಿ ಭಾರಿ ಸಂಖ್ಯೆಯ ಭಕ್ತಾದಿಗಳ ಆಗಮನದಿಂದ ಕಾಲ್ತುಳಿತ ಸಂಭವಿಸಿದ್ದು ಎರಡನೆಯ ಇದ್ದ ಜ್ಞಾನವನ್ನು ತಾತ್ಕಾಲಿಕವಾಗಿ ದಗಿತಗೊಳಿಸಲಾಗಿದೆ. ಅತ್ಯಧಿಕ ಪೊಲೀಸ್ ಬಂದೋಬಸ್ತ ಕಲ್ಪಿಸಲಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

50 ಜನರಿಗೆ ಗಾಯ:

ಪ್ರಯಾಗ್ ರಾಜ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು  50 ಜನ ಗಾಯಗೊಂಡಿರುವ ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.