ಸುದ್ಧಿಕನ್ನಡ ವಾರ್ತೆ
ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಆಚರಣೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಭೀಮನಪಾದ ಎಂದೇ ಪ್ರಖ್ಯಾತವಾದ ಶಾಲ್ಮಲಾ ನದಿ ತಟದಲ್ಲಿ ಶಿವರಾತ್ರಿಯ ಪ್ರಯುಕ್ತ ಯತಿದ್ವಯರ ದಿವ್ಯ ಉಪಸ್ಥಿತಿಯಲ್ಲಿ ಸತ್ಯನಾರಾಯಣ ವೃತ, ಮಹಾಮಂಗಳಾರತಿ, ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆದವು.
ಯಾಗಶಾಲೆಯಲ್ಲಿ ಲಘುರುದ್ರ ಹವನ ಪೂರ್ಣಾಹುತಿಯೊಂದಿಗೆ ಸಂಪನ್ನವಾಯಿತು. ರಾತ್ರಿ ಸ್ವರ್ಣವಲ್ಲೀ ಮಠದಲ್ಲಿ ಶಿವರಾತ್ರಿ ವಿಶೇಷ ಶತರುದ್ರ ಅಭಿಷೇಕ ಪೂಜೆ-ಪುನಸ್ಕಾರಗಳು ನಡೆಯಲಿವೆ.
