ಸುದ್ದಿ ಕನ್ನಡ ವಾರ್ತೆ

ಜೊಯಿಡಾ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಒಕ್ಕೂಟ (ರಿ) ತಾಲೂಕು ಘಟಕ ಜೋಯ್ದಾ ಹಾಗೂ ದಲಿತ ಸಾಹಿತ್ಯ ಪರಿಷತ್ತು (ರಿ) ತಾಲೂಕು ಘಟಕ ಜೋಯ್ದಾ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಶನಿವಾರ (ಮಾ.7) ಮಧ್ಯಾಹ್ನ 2.30 ಗಂಟೆಗೆ ರಾಮನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಶ್ರೀ ಶಶಿಕಾಂತ ಕಾಂಬಳೆ ವಹಿಸಿದರು.
ಕಾರ್ಯಕ್ರಮವನ್ನು ಮಾನ್ಯ ವಲಯ ಅರಣ್ಯಾಧಿಕಾರಿಗಳು ಹಾಗೂ ದಲಿತ ಸಾಹಿತ್ಯ ಪರಿಷತ್ತು ಜೋಯ್ದಾ ಘಟಕದ ಗೌರವಾಧ್ಯಕ್ಷರಾದ ಶ್ರೀ ಪ್ರವೀಣ ಕುಮಾರ್ ಚಲುವಾದಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಪ್ರಸ್ತಾವಿಕ ನುಡಿಯನ್ನು ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ನೌಕರರ ಒಕ್ಕೂಟ ಜೋಯಿಡಾ ಘಟಕದ ಅಧ್ಯಕ್ಷರಾದ ಶ್ರೀ ಶ್ರೀಕಾಂತ ಚಲವಾದಿ ಅವರು ಹೇಳಿದರು.

ಈ ಸಂದರ್ಭದಲ್ಲಿ ವಿನೋದ ಖಾಳೆ ಅವರು ಕ್ರಾಂತಿ ಗೀತೆಯನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಉತ್ಸಾಹ ತುಂಬಿದರು.

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವೂ ನಡೆಯಿತು. ಜೋಯಿಡಾ ತಾಲೂಕಿನ ಎಸ್‌ಸಿ–ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಗಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೊತೆಗೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರರನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಎಸ್ಸಿ-ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೂ ಹಾಗೂ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೂ ಗೌರವ ಸನ್ಮಾನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣವನ್ನು ಮಾನ್ಯ ವಲಯ ಅರಣ್ಯಾಧಿಕಾರಿಗಳಾದ ಶ್ರೀ ಪ್ರವೀಣ ಕುಮಾರ್ ಚಲವಾದಿ ಅವರು ನೀಡಿದರು. ದಿಕ್ಕುಸೂಚಿ ಭಾಷಣವನ್ನು ದಲಿತ ಸಾಹಿತ್ಯ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಅಜ್ಜನಾಳ ಭೀಮಶಂಕರ ಅವರು ನೀಡಿ ದಲಿತ ಸಾಹಿತ್ಯದ ಮಹತ್ವ ಹಾಗೂ ಸಮಾಜದಲ್ಲಿ ಸಮಾನತೆಗಾಗಿ ಸಂಘಟನೆಯ ಅಗತ್ಯವನ್ನು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ದಾಂಡೇಲಿ ಮಾಜಿ ನಗರಸಭಾ ಅಧ್ಯಕ್ಷರಾದ ಗೋವಿಂದ ಮೇಲಗೆರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹಮದ್ ಶೇಖ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಾಮನಗರದ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ರಾಮದಾಸ್ ಪಾರ್ಸೇಕರ್ ಅವರು ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿ.ಎಚ್.ಎಸ್. ಜಗಲಬೆಟ್ ಶಾಲೆಯ ಶಿಕ್ಷಕರಾದ ಕಾಕಾಸಾಬಿ ಲೋಕಂಡೆ ಅವರು ದಲಿತ ಸಾಹಿತ್ಯದ ಕುರಿತು ಕವನ ವಾಚನ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ದಲಿತ ಸಾಹಿತ್ಯ ಪರಿಷತ್ತು ಜೋಯಿಡಾ ಘಟಕದ ಅಧ್ಯಕ್ಷರಾದ ಶ್ರೀ ಶಶಿಕಾಂತ ಕಾಂಬಳೆ ಅವರು ವಹಿಸಿ ಅಧ್ಯಕ್ಷೀಯ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಭಾರತಿ ಎನ್, ಶ್ರೀ ಜಿ.ಡಿ. ಮನೋಜ್, ಶ್ರೀ ಅಶೋಕ್ ದಾಸರ, ಶ್ರೀ ಸುನೀಲ ಸುಭಾಷ್ ಗಾವಡೆ ಉಪಸ್ಥಿತರಿದ್ದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಗೌರವ ಉಪಸ್ಥಿತರಾಗಿ ಶ್ರೀ ಸಂಜೀವ್ ಭಜಂತ್ರಿ, ಶ್ರೀ ರಾಜಪ್ಪ ದೊಡ್ಡಮನಿ, ಶ್ರೀ ರಮಾಕಾಂತ ಪಾರ್ಸೇಕರ್ ಶ್ರೀ ಸಂತೋಷ ಮ್ಯಾಗೇರಿ ಮತ್ತು ಶ್ರೀ ಪಾಂಡುರಂಗ ಪಟಗಾರ್ ಅಧ್ಯಕ್ಷರು ಕ ಸಾ ಪ ಜೋಯಿಡಾ ಘಟಕ
ಕೆವಿಡಿ ದಾಂಡೇಲಿ ಇದರ ಪ್ರಾಂಶುಪಾಲರಾದ ಶ್ರೀ ಹನುಮಂತ ಕುಂಬಾರ ಹಾಗೂ ಡಿ ಎಸ್ ಎಸ್ ಘಟಕದ ಅಧ್ಯಕ್ಷರಾದ ವಿನೋದ್ ಗಾವಡೆ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಾರಂಭದ ನಿರೂಪಣೆಯನ್ನು ಶ್ರೀಯುತ ಮಂಜುನಾಥ ಟಿ ಬಿ ರವರು ಉತ್ತಮ ರೀತಿಯಲ್ಲಿ ನಡೆಸಿಕೊಟ್ಟರು

ಕಾರ್ಯಕ್ರಮದಲ್ಲಿ ದಲಿತ ಸಾಹಿತ್ಯ, ಸಾಮಾಜಿಕ ಜಾಗೃತಿ ಹಾಗೂ ಸಂಘಟನೆಯ ಬಲವರ್ಧನೆ ಕುರಿತು ಚರ್ಚೆಗಳು ನಡೆಯಿತು. ವಿವಿಧ ಕ್ಷೇತ್ರಗಳ ಮುಖಂಡರು, ನೌಕರರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು