ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಆರಂಭಗೊಂಡ ಸುಂಟರಗಾಳಿ ಮಳೆ ಅಡಿಕೆ ತೋಟಗಳಿಗೆ ಭಾರಿ ಹಾನಿ ಉಂಟು ಮಾಡಿದೆ.
ತಾಲೂಕಿನಾದ್ಯಂತ ಬಹುತೇಕ ಎಲ್ಲಾ ಕೃಷಿಕರ ಅಡಿಕೆ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗಿದೆ. ಈ ಬಾರಿ ಪ್ರಮಾಣದ ಗಾಳಿಗೆ ಅಪಾರ ಪ್ರಮಾಣದಲ್ಲಿ ಅಡಿಕೆ ಮರಗಳು ಮುರಿದು ಬಿದ್ದಿವೆ. ಇಷ್ಟೇ ಅಲ್ಲದೆ ಹಲವು ಮನೆಗಳಿಗೆ ಹಾನಿ ಉಂಟಾಗಿದೆ.
ಇಂದು ಬೀಸಿದ ಈ ಬಾರಿ ಗಾಳಿಗೆ ಜನರು ಕಂಗಾಲಾಗಿದ್ದಾರೆ.