ಮುಂಡಗೋಡ : ತಾಲೂಕಿನಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ.ಇದರ ಪರಿಣಾಮ ಪಕ್ಕದ ಮನೆಯ ಸಾತವ್ವ ಬೆಂಗಳೂರ (50) ಎಂಬ ಮಹಿಳೆಗೆ ಗಂಭೀರ ಗಾಯವಾಗಿದೆ. ಮಾಹಿತಿ ತಿಳಿದು ನೋಡಲ ಅಧಿಕಾರಿ ಪ್ರದೀಪ ಭಟ್ ನಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಗಂಭೀರ ವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಯ ಕಿಮ್ಸ್ಗೆ ಕರೆದೊಯ್ಯುಲಾಗಿದೆ.