ಸುದ್ಧಿಕನ್ನಡ ವಾರ್ತೆ
ಉತ್ತರಕನ್ನಡ:ಅಂಕೋಲಾ -ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಳೇಬೈಲ್ ಹತ್ತಿರ ಸರಕು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ವಾಹನ ಸಂಚಾರಕ್ಕೆ ಕೆಲ ಸಮಯ ವ್ಯತ್ಯಯವುಂಟಾದ ಘಟನೆ ಮಂಗಳವಾರ ಸಂಭವಿಸಿದೆ.
ಈ ಘಟನೆಯಲ್ಲಿ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾದ ಬಗ್ಗೆ ಯಾವುದೇ ವರದಿಯಾಗಿಲ್ಲ. ಮಾರ್ಗ ಮಧ್ಯದಲ್ಲಿ ಸರಕು ತುಂಬಿದ ಲಾರಿ ಪಲ್ಟಿಯಾಗಿದ್ದರಿಂದ ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು.