ಸುದ್ದಿಕನ್ನಡ ವಾರ್ತೆ

ಬೆಂಗಳೂರು :ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸದ್ಯ ಮಳೆ ಚುರುಕುಗೊಂಡಿದೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಎಂಟು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅತಿ ಹೆಚ್ಚು ಮಳೆ ಮುನ್ಸೂಚನೆ ನೀಡಲಾಗಿದೆ.

ಅದರಂತೆ ಉಡುಪಿ ,ದಕ್ಷಿಣ ಕನ್ನಡ ,ಬೆಳಗಾವಿ ,ಬೀದರ್, ಕಲಬುರ್ಗಿ, ಯಾದಗಿರಿ, ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯಪುರ ರಾಯಚೂರು ,ಗದಗ ,ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ,ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ