ಸುದ್ಧಿಕನ್ನಡ ವಾರ್ತೆ
ಕರ್ನಾಟಕ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಿಗಿಂತ ಒಳನಾಡು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎ<ದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಂತೆಯೇ ಅಗಷ್ಟ 15 ರಿಂದ ಉತ್ತರಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಗಷ್ಟ 11 ರಂದು ಕರ್ನಾಟಕದ ಬೆಳಗಾವಿ,ಬೀದರ್, ಯಾದಗಿರಿ,ವಿಜಯಪುರ, ಕೊಪ್ಪಳ, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರಿನಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಈ ಎಲ್ಲ ಜಿಲ್ಲೆಗಳಿಗೂ ಸೋಮವಾರ ಯಲ್ಲೊ ಅಲರ್ಟ ಘೋಷಿಸಲಾಗಿದೆ.

ಮುಂಬರುವ 5 ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.