ಸುದ್ದಿ ಕನ್ನಡ ವಾರ್ತೆ

:ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಗೆ ಶಿಕ್ಷಕರನ್ನು ನಿಯೋಜಿಸಲಾದ ಕಾರಣ ಅಕ್ಟೋಬರ್ 18 ರವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಈ ರಜೆ ಅನ್ವಯ ಆಗಲಿದೆ.

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಗಣತಿ ಕಾರ್ಯವನ್ನು ನಡೆಸುತ್ತಿದ್ದು, ಅಕ್ಟೋಬರ್ 7 ರ ವರೆಗೆ ಸಮೀಕ್ಷೆ ಕಾರ್ಯ ಮುಗಿಯ ಬೇಕಾಗಿತ್ತು,ಅಕ್ಟೋಬರ 8 ರಿಂದ ಶಾಲೆಗಳು ಆರಂಭವಾಗಬೇಕಿತ್ತು.

ಸಮೀಕ್ಷೆಯ ಕಾರ್ಯ ಪೂರ್ಣ ಗೊಂಡದ ಕಾರಣ ಶಾಲೆಗಳ ರಜಾ ಅವಧಿಯನ್ನು ವಿಸ್ತರಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ,ಶಿಕ್ಷಕರ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿ ದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.