ಸುದ್ದಿ ಕನ್ನಡ ವಾರ್ತೆ
ಜೋಯಿಡಾ – ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತಗೆ 2023 -24 ನೇ ಸಾಲಿನ ಸರ್ಕಾರದಿಂದ ಸಿಗುವ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ,ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಸಮ್ಮುಖದಲ್ಲಿ ಜೋಯಿಡಾ ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ್ ಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ತಾಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗಣನೀಯ ಸಾಧನೆ ಮಾಡಿದ್ದನ್ನು ಗುರುತಿಸಿ ಕರ್ನಾಟಕ ಸರ್ಕಾರ ಈ ಪುರಸ್ಕಾರವನ್ನು ನೀಡಿದೆ.
ಈ ಸಂದರ್ಭದಲ್ಲಿ ನಂದಿಗದ್ದೆ ಗ್ರಾಮ ಪಂಚಾಯತ ಅಧ್ಯಕ್ಷ ಅರುಣ ದೇಸಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಸಿ, ಸಿಬ್ಬಂದಿಗಳಾದ ರಜತ ನಾಯ್ಕ,ನಾರಾಯಣ ಬಾಂದೇಕರ ಇತರರು ಇದ್ದರು.
