ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲಾ ಸಂಸದ ರಾದ ವಿಶ್ವೇಶ್ವರ. ಹೆಗಡೆ. ಕಾಗೇರಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಸನ್ಮಾನ್ಯ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಕರಾವಳಿ ಕರ್ನಾಟಕದ ಪ್ರಮುಖ ಪ್ರದೇಶಗಳಾದ, ಮಡಗಾಂವ್,ಕಾರವಾರ, ಉಡುಪಿ, ಮತ್ತು ಮಂಗಳೂರನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸಲು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ಪರಿಚಯಿಸುವಂತೆ ಕೋರಿ ಮನವಿ ನೀಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದಕೇಂದ್ರ ಸಚಿವರು ಸಕಲೇಶಪುರ ಘಾಟ್ ನಡುವೆ ವಿದ್ಯುದ್ದಿಕರಣ ಕಾಮಗಾರಿ ಪರೀಕ್ಷಾರ್ಥ ಹಂತದಲ್ಲಿದ್ದು, ಪರೀಕ್ಷೆ ಪೂರ್ಣಗೊಂಡ ತಕ್ಷಣ ಈ ಸೇವೆಯನ್ನು ಪ್ರಾರಂಭಿಸುವ ಭರವಸೆಯನ್ನ ನೀಡಿದರು ಎಂದು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
