ಸುದ್ದಿ ಕನ್ನಡ ವಾರ್ತೆ

ಚಿಕ್ಕೋಡಿ: ತಾಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ 7ನೇ ತರಗತಿ ವಿದ್ಯಾರ್ಥಿ ಕೃಷ್ಣಾ ಮಂಜುನಾಥ್ ಹೆಗಡೆ (13) ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಲಾ ಆವರಣದಲ್ಲಿ ಶೋಕದ ವಾತಾವರಣ ಆವರಿಸಿದೆ. ಬಾಲಕನ ಅಕಾಲಿಕ ಮರಣಕ್ಕೆ ಕಾರಣವಾದ ನಿರ್ಲಕ್ಷ್ಯದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಆರೋಪ ಪೋಷಕರಿಂದ ಕೇಳಿ ಬಂದಿದೆ.

ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.