ಸುದ್ದಿ ಕನ್ನಡ ವಾರ್ತೆ
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ ಚಿತ್ರದುರ್ಗದ ಹಿರಿಯೂರು ಬಳಿ ಭೀಕರ ಅಪಘಾತಕ್ಕೀಡಾದ ಸುದ್ದಿ ಕೇಳಿ ಮನಸ್ಸಿಗೆ ಬೆಳ್ಳಂಬೆಳಗ್ಗೆ ಬರಸಿಡಿಲು ಬಡಿದಂತಾಗಿದೆ.
ಸುಖಕರ ಪ್ರಯಾಣದ ನಿರೀಕ್ಷೆಯಲ್ಲಿದ್ದ ಒಂಬತ್ತಕ್ಕೂ ಹೆಚ್ಚು ಜೀವಗಳು ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿರುವ ಘಟನೆ ಅತ್ಯಂತ ಹೃದಯವಿದ್ರಾವಕ. ವಿಧಿಯ ಆಟ ಎಷ್ಟು ಕ್ರೂರವೆಂದರೆ, ಮರಳಿ ಮನೆಗೆ ಬರುತ್ತಾರೆಂದು ಕಾಯುತ್ತಿದ್ದ ಕುಟುಂಬಗಳಿಗೆ ಇಂದು ಮರೆಯಲಾಗದ ಶೋಕದ ಕಡಲನ್ನೇ ಈ ದುರ್ಘಟನೆ ಉಡುಗೊರೆಯಾಗಿ ನೀಡಿದೆ.
ಈ ಭೀಕರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದ್ದು, ರಾಜ್ಯ ಸರ್ಕಾರವು ಕೂಡಲೇ ಸ್ಪಂದಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಅತ್ಯಂತ ಶೀಘ್ರವಾಗಿ ಮತ್ತು ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ಮಾಡುವುದು ಸರ್ಕಾರದ ಆದ್ಯತೆಯಾಗಲಿ ಎಂದು ನಾನು ಒತ್ತಾಯಿಸುತ್ತೇನೆ.
ವಿಧಿಯ ಅಟ್ಟಹಾಸಕ್ಕೆ ಬಲಿಯಾದ ಆತ್ಮಗಳಿಗೆ ಭಗವಂತನು ಚಿರಶಾಂತಿ ನೀಡಲಿ ಮತ್ತು ನೋವಿನಲ್ಲಿರುವ ಅವರ ಕುಟುಂಬಗಳಿಗೆ ಈ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ.
ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದರು ಉತ್ತರ ಕನ್ನಡ.
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರು ಸಮೀಪದ ಜವನಗೊಂಡನಹಳ್ಳಿಯಲ್ಲಿ ಬೆಂಕಿಗಾಹುತಿಯಾಗಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಿಜಕ್ಕೂ ಆಘಾತಕಾರಿ.
