ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ :ಶನಿವಾರ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದ ಭೀಕರ ಹತ್ಯಾ ಪ್ರಕರಣದಲ್ಲಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಂಜಿತಾ ಬನಸೋಡೆ ಅವರು ಅಮಾನವೀಯವಾಗಿ ಮೃತಪಟ್ಟಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಶೋಕ ವ್ಯಕ್ತಪಡಿಸಿದ್ದಾರೆ.
ಇಂದು ಮೃತ ಯುವತಿಯ ನಿವಾಸಕ್ಕೆ ಭೇಟಿ ನೀಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಒದಗಿಸಲಾದ 8.25 ಲಕ್ಷ ರೂಪಾಯಿ ಪರಿಹಾರ ಧನದ ಆದೇಶ ಪತ್ರವನ್ನು ಶಾಸಕ ಶಿವರಾಮ ಹೆಬ್ಬಾರ್ ಕುಟುಂಬಸ್ಥರಿಗೆ ವಿತರಿಸಿದರು.
ಬಳಿಕ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
