ಸುದ್ದಿ ಕನ್ನಡ ವಾರ್ತೆ
ಹುಬ್ಬಳ್ಳಿ:ಇಲ್ಲಿನ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪೈನಲ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದೆ.
ಮೊದಲ ದಿನದಾಟದ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರ ಕೇವಲ 2 ವಿಕೆಟ್ ಕಳೆದುಕೊಂಡು 284 ರನ್‌ಗಳಿಸಿದೆ.ಜಮ್ಮು- ಕಾಶ್ಮೀರದ ಶುಭಂ ಪುಂಡಿರ್ ಅಜೇಯ ಶತಕ ಸಿಡಿಸಿ ತಮ್ಮ ತಂಡವನ್ನ ಬೃಹತ್ ಮೊತ್ತದತ್ತ ದಾಪುಗಾಲನ್ನಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿಯಲ್ಲಿ ಪೈನಲ್ ತಲುಪಿರುವ ಜಮ್ಮು ಮತ್ತು ಕಾಶ್ಮೀರ ತಂಡವು, ಸ್ಟಾರ್‌ಗಳಿಂದ ತುಂಬಿರುವ ಕರ್ನಾಟಕ ತಂಡದ ವಿರುದ್ಧ ಉತ್ತಮ ಪ್ರದರ್ಶನ ತೋರಿದೆ. 2025-26 ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಹುಬ್ಬಳ್ಳಿಯ ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದೆ. ಮೊದಲ ದಿನದಾಟದ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರ ಕೇವಲ 2 ವಿಕೆಟ್ ಕಳೆದುಕೊಂಡು 284 ರನ್‌ಗಳಿಸಿದೆ. ಶುಭಂ ಪುಂಡಿರ್ ಅಜೇಯ ಶತಕ ನೆರವಿನಿಂದ ಬೃಹತ್ ಮೊತ್ತದತ್ತ ದಾಪುಗಾಲನ್ನಿಟ್ಟಿದೆ.ಕರ್ನಾಟಕ ತಂಡದ ಪರ ಪ್ರಸಿದ್ಧ ಕೃಷ್ಣ 2 ವಿಕೆಟ್ ಪಡೆದರು.
