ಸುದ್ದಿ ಕನ್ನಡ ವಾರ್ತೆ
ತಿರುಪತಿ:ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು,ಶಾಸಕರಾದ ಆರ್ ವಿ ದೇಶಪಾಂಡೆಯವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕುಟುಂಬ ಸಮೇತರಾಗಿ ಭೂ ವೈಕುಂಠವೆಂದು ಪ್ರಸಿದ್ಧವಾದ ತಿರುಪತಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಪದ್ಮಾವತಿ ಅಮ್ಮನವರ ಹಾಗೂ ಶ್ರೀ ವೆಂಕಟರಮಣ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜಾ ಸೇವೆಯನ್ನು ಸಲ್ಲಿಸಿ ರಾಜ್ಯ ಹಾಗೂ ದೇಶದ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು. ಸಕಲ ಸಂಕಷ್ಟಗಳು ದೂರವಾಗಿ ಎಲ್ಲರಿಗೂ ಒಳಿತು ಆಗಲಿ ಮತ್ತು ನಾಡು ಸದಾ ಸುಭಿಕ್ಷವಾಗಿರಲಿ ಎಂದು ದೇವರಲ್ಲಿ ಬೇಡಿಕೊಂಡರು.
ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿರುವುದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.