Banner Ad

ಸುದ್ದಿ ಕನ್ನಡ ವಾರ್ತೆ
​ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ. ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

 

Banner Ad

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡುವ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಪ್ರಕಟಿಸಿದ ಅವರು, ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯತ್ ಪ್ರಶಸ್ತಿ’ ನೀಡುವ ಕಾರ್ಯಕ್ರಮ ರೂಪಿಸಲು ಆರ್‌ಡಿಪಿಆರ್ ಸಚಿವರೊಂದಿಗೆ ಚರ್ಚಿಸಿರುವುದಾಗಿ ಹಾಗೂ ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಲು ತೀರ್ಮಾನಿಸಿರುವುದಾಗಿಯೂ ಹೇಳಿದರು..

Banner Ad