ಸುದ್ದಿ ಕನ್ನಡ ವಾರ್ತೆ
ಹಳಿಯಾಳ ತಾಲ್ಲೂಕಿನ ಕಬ್ಬು ಬೆಳೆಗಾರರು ಕಳೆದ ಸುಮಾರು ಎರಡು ತಿಂಗಳಿನಿಂದ ಕಬ್ಬಿನ ನ್ಯಾಯಯುತ ಬೆಲೆ ಹೆಚ್ಚಳಕ್ಕಾಗಿ ಪ್ರತಿಭಟನೆ, ಧರಣಿ ಸೇರಿದಂತೆ ವಿವಿಧ ಹೋರಾಟಗಳನ್ನು ನಡೆಸುತ್ತಾ ಬಂದಿದ್ದು ಇತ್ತೀಚೆಗೆ ರಾಜ್ಯ ಸರ್ಕಾರ ಮತ್ತು ಕಬ್ಬು ಬೆಳೆಗಾರರ ಸಂಘದ ನಡುವೆ ನಡೆದ ಮಾತುಕತೆಯ ನಂತರ ಪ್ರತಿ ಟನ್ ಕಬ್ಬಿಗೆ 3,600 ದರ ಘೋಷಿಸಲಾಗಿತ್ತು.
ಕಬ್ಬಿನ ಬೆಲೆ ನಿಗದಿಯಲ್ಲಿ ಹಳಿಯಾಳದ ರೈತರಿಗೆ ಅನ್ಯಾಯವಾಗಿದ್ದು ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನಿಗದಿಪಡಿಸಲಿ ಎಂದು ಹಳಿಯಾಳ ತಹಶೀಲ್ದಾರ್ ಕಛೇರಿಯಲ್ಲಿ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಸುನಿಲ್ ಹೆಗಡೆ ರವರ ನೇತೃತ್ವದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವಿಠ್ಠಲ ಸಿದ್ದನ್ನವರ ರವರ ಉಪಸ್ಥಿತಿಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಮನವಿ ಸಲ್ಲಿಸಲಾಗಿತ್ತು
ಹಳಿಯಾಳದ ರೈತರಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಕಬ್ಬಿನ ದರ ನಿಗದಿಪಡಿಸದಿದ್ದಲ್ಲಿ, ನಮ್ಮ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ, ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಸುನಿಲ ವಿ. ಹೆಗಡೆ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್ ಎಲ್ ಘೋಟ್ನೆಕರ್ ಅವರ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಾರ್ಟಿ ಹಳಿಯಾಳ ಮಂಡಲದ ಸಂಯೋಜನೆಯಲ್ಲಿ ಸಕ್ಕರೆ ಕಾರ್ಖಾನೆಯ ಎದುರು ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಇ ಐ ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮೇಲೆ ಭಾರತೀಯ ಜನತಾ ಪಾರ್ಟಿ ಹಳಿಯಾಳ ವತಿಯಿಂದ ನಿರಂತರ ಒತ್ತಡ ಹೇರಿದ್ದರ ಪರಿಣಾಮವಾಗಿ ಇಂದು ಇ ಐ ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಪ್ರತಿ ಟನ ಕಬ್ಬಿಗೆ 3800 ರೂಪಾಯಿಗಳ ದರ ಘೋಷಿಸಿದೆ.
ಭಾರತೀಯ ಜನತಾ ಪಾರ್ಟಿಯ ರೈತಪರ ಕಾಳಜಿಗೆ ಜಯ ಸಂದಂತಾಗಿದೆ.
ರೈತರ ಬೆವರಿನ ಹನಿಗೆ ತಕ್ಕ ಬೆಲೆ ಸಿಗಬೇಕು. ಅನ್ನದಾತರಿಗೆ ಅನ್ಯಾಯವಾದರೆ ಭಾರತೀಯ ಜನತಾ ಪಾರ್ಟಿ ರೈತರ ಪರವಾಗಿ ಹೋರಾಟಕ್ಕೆ ಸದಾ ಸಿದ್ಧವಿದೆ.
