ಸುದ್ದಿ ಕನ್ನಡ ವಾರ್ತೆ

ಭಟ್ಕಳ: ಕರ್ನಾಟಕಕ್ಕೆ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಕೋಟ್ಯಾಂತರರು ಹಣವನ್ನು ಇತ್ತೀಚಿಗಷ್ಟೇ ಪೊಲೀಸರು ವಶಪಡಿಸಿಕೊಂಡಿದ್ದ ಘಟನೆ ನಡೆದ ಕೆಲವೇ ದಿನಗಳಲ್ಲಿ ಇದೀಗ ಮುಂಬೈನಿಂದ ಭಟ್ಕಳಕ್ಕೆ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಬಂಗಾರ ಹಾಗೂ ಹಣವನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಬೈನಿAದ ಭಟ್ಕಳಕ್ಕೆ ಬರುತ್ತಿದ್ದ ಖಾಸಗೀ ಬಸ್ಸಿನಲ್ಲಿ ಅಕ್ರಮವಾಗಿ ಹಣ ಹಾಗೂ ಚಿನ್ನದ ಒಡವೆಗಳನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಬೈನಿAದ ಭಟ್ಕಳಕ್ಕೆ ಬರುತ್ತಿದ್ದ ಇರ್ಫಾನ್ ಎಂಬವರ ಹೆಸರಿನ ಪಾರ್ಸೆಲ್‌ನ್ನು ತಪಾಸಣೆ ನಡೆಸಿದಾಗ, ಅದರೊಳಗೆ ಸುಮಾರು ೫೦ ಲಕ್ಷ ರೂಪಾಯಿ ನಗದು ಹಾಗೂ ೪೦೧ ಗ್ರಾಂ. ಚಿನ್ನದ ಬಳೆಗಳು ಪತ್ತೆಯಾದವು. ಪತ್ತೆಯಾದ ಹಣ ಹಾಗೂ ಚಿನ್ನಕ್ಕೆ ಸಂಬAಧಿಸಿದ ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ದಾಳಿಯಲ್ಲಿ ಸಿಪಿಐ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಪಿಎಸ್‌ಐ ನವೀನ್ ನಾಯ್ಕ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.