Banner Ad

ಸುದ್ದಿ ಕನ್ನಡ ವಾರ್ತೆ

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಯಾಗಿರುವ ನದಿಗಳ ತಿರುವು ಯೋಜನೆ ವಿರೋಧಿಸಿ ಬೇಡ್ತಿ – ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ
ಹಾಗೂ
*ಧರಣಿ ಆಯೋಜನ ಬಳಗ*, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 10 ಶನಿವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ, ಬೇಡ್ತಿ ಹಾಗೂ ಅಘನಾಶಿನಿ ನದಿ ತಿರುವು ಯೋಜನೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ.

Banner Ad

ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಯಿತು.

ಈ ಪ್ರತಿಭಟನೆಗೆ ಆಗಮಿಸುವವರಿಗೆ ಅಗತ್ಯವಿದ್ದವರಿಗೆ, ಶನಿವಾರ ಬೆಳಗ್ಗೆ ಬೆಂಗಳೂರಿನ *ಹವ್ಯಕ ಸಂಸ್ಥೆಯಲ್ಲಿ ವಸತಿ, ಸ್ನಾನ ಹಾಗೂ ತಿಂಡಿಯ ವ್ಯವಸ್ಥೆ ಮಾಡಲಾಗಿದ್ದು ಈ ಕುರಿತಂತೆಯೂ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.

ಉತ್ತರ ಕನ್ನಡ ಜಿಲ್ಲೆಯಿಂದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಹೋರಾಟದ ರೂಪುರೇಷೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

Banner Ad