ಸುದ್ದಿ ಕನ್ನಡ ವಾರ್ತೆ
ದಾಂಡೇಲಿ : ನಗರದಲ್ಲಿ ಸುರಿದ ಭಾರೀ ಮಳೆಗೆ ಸ್ಥಳೀಯ ದೇಶಪಾಂಡೆ ನಗರದಲ್ಲಿ ಮನೆಯೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಹಾನಿ ಸಂಭವಿಸಿದ ಘಟನೆ ಗುರುವಾರ ನಸುಕಿನ ವೇಳೆಯಲ್ಲಿ ನಡೆದಿದೆ.
ದೇಶಪಾಂಡೆ ನಗರದ ನಿವಾಸಿ ವಿನೋದ ಪೂಜಾರಿ ಎಂಬವರ ಮನೆಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಪಾರ ಹಾನಿಯಾಗಿದೆ. ಮನೆಯ ಮೇಲ್ಚಾವಣಿ ಶೀಟುಗಳು ಒಡೆದು ಹೊಗಿದ್ದು, ಮನೆಯ ಗೋಡೆಯಲ್ಲಿ ಬಿರುಕು ಮೂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಗಾಯ ನೋವೂ ಸಂಭವಿಸಿಲ್ಲ.