ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಬುಧವಾರ ರಾತ್ರಿ ಯಲ್ಲಾಪುರ ತಾಲೂಕಿನ ಕೊಡ್ಲ ಗದ್ದೆ ತಾರಿಪಾಲ್ ಮುಖ್ಯರಸ್ತೆಯಲ್ಲಿ ಬಾರಿ ಗಾಳಿಗೆ 8 ವಿದ್ಯುತ್ ಕಂಬಗಳು ರಸ್ತೆಯಲ್ಲಿ ಸಾಲಾಗಿ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಗುಳ್ಳಾಪುರ ಗ್ರಿಡ್ ಲೈನ್ ನಿಂದ ವಿದ್ಯುತ್ ಪೂರೈಕೆಯಾಗುವ ಎಲ್ಲ ಊರುಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಿದ್ಯುತ್ ಲೈನ್ ಸಂಪೂರ್ಣವಾಗಿ ರಸ್ತೆಯ ಮೇಲೆ ಬಿದ್ದಿದ್ದು ಆತಂಕಕ್ಕೂ ಕಾರಣವಾಗಿದೆ.

ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ  ನೀಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ.