ಸುದ್ದಿ ಕನ್ನಡ ವಾರ್ತೆ

ದಾಂಡೇಲಿ : ಕಳೆದ ಒಂದು ವಾರದಿಂದ ನಿರಂತರವಾಗಿ ಆನೆಗಳ ಹಾವಳಿಯಿಂದ ಸ್ಥಳೀಯ ರೈತರ ಭತ್ತದ ಗದ್ದೆಗಳಿಗೆ ದಾಳಿ ಮಾಡುತ್ತಿರುವುದರಿಂದ ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ನಾಶವಾಗಿರುವ ಘಟನೆ ತಾಲೂಕಿನ ಬೇಡರಶಿರಗೂರಿನಲ್ಲಿ ನಡೆದಿದೆ.

ತಡರಾತ್ರಿ ಇಲ್ಲವೇ ನಸುಕಿನ ವೇಳೆಯಲ್ಲಿ ಆನೆಗಳು ಗದ್ದೆಗಳಿಗೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ. ಇದರಿಂದ ಸ್ಥಳೀಯ ರೈತರಿಗೆ ಸಂಕಷ್ಟ ಎದುರಾಗಿದೆ.