ಸುದ್ಧಿಕನ್ನಡ ವಾರ್ತೆ
ಉತ್ತರಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಸೋಮವಾರವೂ ಮಳೆ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಠಿಯಿಂದ ಉತ್ತರಕನ್ನಡ ಜಿಲ್ಲೆಯ ಜೊಯಿಡಾ ಮತ್ತು ದಾಂಡೇಲಿ ಈ ಎರಡೂ ತಾಲೂಕುಗಳಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ರವರು ಸೋಮವಾರ ಶಾಲೆಗೆ ರಜೆ ಘೋಷಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಅಗಷ್ಟ 3 ರ ವರೆಗೆ ಆರೆಂಜ್ ಅಲರ್ಟ ಘೋಷಿಸಿದೆ. ಜೊಯಿಡಾ ಮತ್ತು ದಾಂಡೇಲಿ ಭಾಗದಲ್ಲಿ ಈ ದಿನಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಜೊಯಿಡಾ ಹಾಗೂ ದಾಂಡೇಲಿಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಹಾಗೂ ಅಂಗನವಾಡಿಗಳಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ರವರು ಸೋಮವಾರ ರಜೆ ಘೋಷಿಸಿದ್ದಾರೆ.
