ಸುದ್ದಿ ಕನ್ನಡ ವಾರ್ತೆ
ಶಿರಸಿ: ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿರುವುದರಿಂದ ಶಿರಸಿ ಹಾಗೂ ಕುಮಟಾ ಎರಡೂ ಕಡೆಯಿಂದ ರಾತ್ರಿ ಸಂಚಾರ ನಿರ್ಬಂಧಿಸಲಾಗಿದೆ.
ಸಾಯಂಕಾಲ 6ರಿಂದ ಬೆಳಿಗ್ಗೆ 6 ಗಂಟೆವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗಿದೆ. ಈ ಹಿನ್ನೆಲಯಲ್ಲಿ ಫಲಕ ಅಳವಡಿಸಿ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.