Banner Ad

ಸುದ್ದಿ ಕನ್ನಡ ವಾರ್ತೆ

ಅಂಕೋಲಾ: ತಾಲೂಕಿನ ಸುಂಕಸಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಎರಡು ಖಾಸಗಿ ಬಸ್‌ಗಳು ಮತ್ತು ಲಾರಿ ನಡುವೆ ತಿರುವಿನಲ್ಲಿ ಇಂದು ನಸುಕಿನ ಜಾವ ಭೀಕರ ಸರಣಿ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಐದಕ್ಕೂ ಹೆಚ್ಚಿನ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹಂಪಿಯಿಂದ ಗೋವಾದ ಕಡೆಗೆ ಪ್ರಯಾಣಿಸುತ್ತಿದ್ದ ಸಿರ್ಬಡ್‌ ಬಸ್, ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಗಣೇಶ ಬಸ್ ಹಾಗೂ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಕೆಲವರನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನು ಕೆಲವರಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಸುಂಕಸಾಳ ಹಾಗೂ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Banner Ad
Banner Ad