ಸುದ್ದಿ ಕನ್ನಡ ವಾರ್ತೆ

ಸಿದ್ದಾಪುರ:ಪಟ್ಟಣದಲ್ಲಿ ಅತಿ ವೇಗವಾಗಿ ಬಂದ ಟಾಟಾ ನ್ಯಾನೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಸಿದ್ದಾಪುರ ಪಟ್ಟಣದ ರವೀಂದ್ರನಗರದ ಸಿದ್ದಾಪುರ ಶಿರಸಿ ರಾಜ್ಯ ಹೆದ್ದಾರಿಯ ಹಿರೋ ಶೋರೂಮ್ ಬಳಿ ನಡೆದಿದೆ. ಬುಧವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಶಿರಸಿ ಕಡೆಯಿಂದ ಸಿದ್ದಾಪುರಕ್ಕೆ ಬರುತ್ತಿದ್ದ ಟಾಟಾ ನ್ಯಾನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಗೆ ನುಗ್ಗಿದೆ. ಈ ವೇಳೆ ರಸ್ತೆ ಪಕ್ಕದ ಕಚ್ಚಾ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಬಿಳಿ ಬಣ್ಣದ ಮಾರುತಿ ಸುಜುಕಿ ಬ್ರಿಝಾ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ನ್ಯಾನೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ತಲೆ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರುತಿ ಕಾರಿನ ಮಾಲಕ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ಶಬ್ದಕ್ಕೆ ಸ್ಥಳೀಯರು ಓಡಿ ಬಂದು ಗಾಯಾಳು ಗಳನ್ನು ವಾಹನದಿಂದ ಇಳಿಸಿ,ಸ್ಥಳೀಯರ ಕಾರಿನಲ್ಲೇ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರು.