Banner Ad

ಸುದ್ದಿ ಕನ್ನಡ ವಾರ್ತೆ
ಅಂಕೋಲಾ : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಲ್ಲಿರುವ ಗಂಗಾವಳಿ ಸೇತುವೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸುವುದು ಸರ್ಕಾರದ ಬದ್ಧತೆಯಾಗಿದೆ. ಜನತೆಯ ಪಾಲ್ಗೊಳ್ಳುವಿಕೆಯಿಂದ ಶಕ್ತಿಶಾಲಿ ಸ್ಥಳೀಯ ಆಡಳಿತ ನಿರ್ಮಾಣ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು.

Banner Ad

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ. ದೇಶಪಾಂಡೆ, ಸತೀಶ ಸೈಲ್, ಬೀಮಣ್ಣ ನಾಯ್ಕ, ದಿನಕರ ಶೆಟ್ಟಿ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿ ಉಪಸ್ಥಿತರಿದ್ದರು.

Banner Ad