ಸುದ್ದಿ ಕನ್ನಡ ವಾರ್ತೆ

ಕಾರವಾರ : ಮುಂಬರುವ ಸ್ಥಳೀಯ ಚುನಾವಣೆಯ ಲಾಭ ಪಡೆಯುವ ಉದ್ದೇಶದಿಂದ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿದಂತೆ ಕಂಡುಬರುತ್ತದೆ ಎಂದು ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದಾರೆ.

ಹಿಂದಿನ ಅವಧಿಯ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕರಾಗಿದ್ದ ರೂಪಾಲಿ ನಾಯ್ಕ್ ರವರ ವಿಶೇಷ ಪ್ರಯತ್ನದಿಂದ ಕಟ್ಟಡ ನಿರ್ಮಾಣಗೊಂಡಿದೆ. ಸಿದ್ದವಾದ ಕಟ್ಟಡದ ಉದ್ಘಾಟನೆಗೆ ಮುಖ್ಯಮಂತ್ರಿಯವರೇ ಬಂದು ಉದ್ಘಾಟಿಸಿ
ಹಿಂದಿನ ಬಿಜೆಪಿ ಕಾಂಗ್ರೆಸ್ ಸರಕಾರಗಳ ಕಾಲದಿಂದ ಆರಂಭಗೊಂಡು ನಡೆದ ಕಾಮಗಾರಿಗಳ ಉದ್ಘಾಟನೆ ಮಾಡಿ ಅಭಿವೃದ್ಧಿ ಎಲ್ಲವನ್ನೂ ಕೇವಲ ಕಾಂಗ್ರೆಸ್ ಮಾತ್ರ ಮಾಡಿದೆ ಎನ್ನುವ ರೀತಿಯಲ್ಲಿ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಮಾತನಾಡಿದ್ದು ಕೇವಲ ರಾಜಕೀಯ ಉದ್ದೇಶಗಳಿಗೆ ಎನ್ನುವುದು ಸ್ಪಷ್ಟವಾಗಿದೆ.

ಜಿಲ್ಲೆಯ ಜನತೆಯ ಜ್ವಲಂತ ಸಮಸ್ಯೆಗಳ ಕುರಿತು ಕಿಂಚಿತ್ತು ಗಮನಹರಿಸದೆ ಈ ಕುರಿತು ತಮ್ಮ ಮಾತುಗಳಲ್ಲಿ ಯಾವುದೇ ಉಲ್ಲೇಖ ಮಾಡದೆ ಇರುವುದು ವಿಷಾದನೀಯ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹು ಚರ್ಚಿತವಾಗಿ ಜನರ ತೀವ್ರ ವಿರೋಧಕ್ಕೆ ಕಾರಣವಾದ ನದಿ ತಿರುವು ಯೋಜನೆಗಳು, ಶರಾವತಿ ಪಂಪ್ ಸ್ಟೋರೇಜ್ ಯೋಜನೆ, ಬಂದರುಗಳ ಕಾಮಗಾರಿ, ಅರಣ್ಯ ಅತಿಕ್ರಮಣ ಸಮಸ್ಯೆ ಮತ್ತು ಎಲೆ ಚುಕ್ಕೆ ರೋಗದಿಂದ ಸಂಕಷ್ಟದಲ್ಲಿರುವ ರೈತರ ವಿಚಾರಗಳಿಗೆ ಮಳೆ ಮಾಪನದ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳಿಗೆ ಯಾವುದೇ ರೀತಿಯಲ್ಲಿ ಗಮನಹರಿಸಿರುವುದು ಕಂಡುಬಂದಿಲ್ಲ. ಈ ವಿಷಯಗಳ ಕುರಿತು ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳು ಯಾವುದೇ ಪ್ರಸ್ತಾಪ ಮಾಡದಿರುವುದನ್ನು ನೋಡಿದರೆ ಮುಖ್ಯಮಂತ್ರಿಗಳ ಪ್ರವಾಸ ಕೇವಲ ರಾಜಕೀಯ ಉದ್ದೇಶಗಳಿಗಾಗಿ ಎಂಬಂತೆ ತೋರುತ್ತದೆ. ಬಿಜೆಪಿಯನ್ನು ಟೀಕಿಸುವ ಉದ್ದೇಶಕ್ಕೆ ಪ್ರವಾಸ ಮಾಡಿದಂತೆ ಕಂಡುಬಂತು. ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಕಾಂಗ್ರೆಸ್ ಶಾಸಕರುಗಳು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸಿ ಈ ಕುರಿತು ಯಾವ ಮನವಿ ನೀಡಿದ್ದಾರೆ ಎನ್ನುವುದನ್ನು ತಿಳಿಸಲಿ.
. ಬರುವ ಬಜೆಟ್ ನಲ್ಲಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುತ್ತೇವೆ ಎಂದಿರುವುದು ಸ್ವಾಗತಾರ್ಹವಾದರೂ, ಕಾರವಾರದ ಕ್ರಿಮ್ಸ್ ಆಸ್ಪತ್ರೆ ಮತ್ತು ಶಿರಸಿಯ ಪಂಡಿತ್ ಜನರಲ್ ಆಸ್ಪತ್ರೆಗಳಿಗೆ ಅಗತ್ಯವಾದ ವೈದ್ಯಕೀಯ ಉಪಕರಣಗಳು ಮತ್ತು ನುರಿತ ವೈದ್ಯರುಗಳ ನಿಯೋಜನೆಯನ್ನು ಮಾಡದೆ ಕೇವಲ ಬಜೆಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುತ್ತೇವೆ ಎಂದು ಘೋಷಿಸುವುದು ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಆಗಬಾರದು. ಜಿಲ್ಲೆಯ ಎಲ್ಲಾ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಲಮಿತಿಯಲ್ಲಿ ವೈದ್ಯಕೀಯ ಸೇವೆ ದೊರಕುವಂತಹ ಕ್ರಮ ಕೈಗೊಳ್ಳಬೇಕು.

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರತಿಯೊಂದು ಇಲಾಖೆಯಲ್ಲಿ ಅಧಿಕಾರಿಗಳ ಸಿಬ್ಬಂದಿಗಳ ಕೊರತೆ ಇದೆ ಅದರ ಬಗ್ಗೆ ಮಾತನಾಡಬಹುದಿತ್ತು, ಮಲ್ಟಿಸ್ಪೆಷಲಿಟಿ ಆಸ್ಪತ್ರೆಗೆ ಹಣ ಇಲ್ಲೇ ಘೋಷಣೆ ಮಾಡಬಹುದಿತ್ತು ಅದನ್ನ ಬಜೇಟ್ ನಲ್ಲೇ ಘೋಷಿಸುವ ಅಗತ್ಯ ಇಲ್ಲವಾಗಿತ್ತು ಇದು ಇಲ್ಲಿನ ಜನರನ್ನು ಮರಳುಮಾಡುವದಾಗಿದೆ. ಇಲ್ಲಿನ ಜನ ಇವರ ರಾಜಕೀಯ ಉದ್ದೇಶಿತ ಕಾರ್ಯಕ್ರಮದ ಕುರಿತಾದ ತಿಳುವಳಿಕೆ ಹೊಂದಿದ್ದಾರೆ ಎಂದು ಅನಂತ ಮೂರ್ತಿ ಹೆಗಡೆ ಅವರು ರವಿವಾರ ನಡೆದ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆ ವಿಶಾಲವಾಗಿದ್ದು ಕಾರವಾರ ದೂರದ ಪ್ರದೇಶ ವಾದ್ದರಿಂದ
ಕೂಡಲೇ ಹಿಂದಿನ ಬಿಜೆಪಿ ಸರಕಾರದಲ್ಲಿ ಘೋಷಣೆ ಆಗಿದ್ದ ಕುಮಟಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭಿಸಬೇಕು ಮತ್ತು
ಸಿದ್ದಾಪುರ -ಶಿರಸಿ ಭಾಗದ ಜನರಿಗಾಗಿ ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರ ನೇಮಕಾತಿ ಯಾತ್ರೋಪಕರಣಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯಬೇಕು ಎಂದು ಆಗ್ರಹಿಸಿದರು