ಸುದ್ದಿ ಕನ್ನಡ ವಾರ್ತೆ
ಅಂಕೋಲಾ : ಗೊಬ್ಬರದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟರಿರುವ ಘಟನೆ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ.
ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3)
ಮೃತಪಟ್ಟ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು.
ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ ಕೊಟ್ಟಿಗೆಯ ಕೆಲಸದಲ್ಲಿ ಮಗ್ನರಾಗಿದ್ದರು.
ಹೀಗಾಗಿ ಮಗಳ ಚಲನವಲನವನ್ನು ಗಮನಿಸಿರಲಿಲ್ಲ, ಕೆಲ ಸಮಯದ ಬಳಿಕ ಮಗಳ ಸದ್ದು ಕೇಳಿಸದೆ ಇದ್ದುದರಿಂದ ಸುತ್ತ ಮುತ್ತ ಹುಡುಕಾಟ ನಡೆಸಿದ್ದಾನೆ. ಕೊನೆಗೆ ಮಗು ಸಾದ್ವಿ ಗೊಬ್ಬರ ಗುಂಡಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ತಕ್ಷಣ ಗುಂಡಿಯಿಂದ ಮಗುವನ್ನು ಮೇಲಕೆತ್ತಿ ತಾಲೂಕಾಸ್ಪತ್ರೆ ಕರೆತಂದಿದ್ದಾರೆ, ವೈದ್ಯರು ಪರೀಕ್ಷಿಸಿದಾಗ ಮಗು ಸಾವನ್ನಪ್ಪಿರುವ ಬಗ್ಗೆ ದೃಢಪಡಿಸಿದ್ದಾರೆ. ಪುಟ್ಟ ಕಂದಮ್ಮನ ಸಾವಿನಿಂದ
ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.