ಸುದ್ದಿ ಕನ್ನಡ ವಾರ್ತೆ
ನಿರುದ್ಯೋಗ ಸೃಷ್ಟಿಗೆ ಕಾಂಗ್ರೆಸ್ಸೇ ಕಾರಣ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡದೆ ನಿರುದ್ಯೋಗವನ್ನು ಸೃಷ್ಟಿ ಮಾಡುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಅಧ್ಯಕ್ಷ ಎನ್ ಎಸ್ ಹೆಗಡೆ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇವಲ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ಕಿತ್ತಾಟವನ್ನು ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ 2,85,000 ಹುದ್ದೆಗಳು ಖಾಲಿ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೆ ಕರ್ನಾಟಕದಲ್ಲಿ ಅರಾಜಕತೆಯನ್ನು ಮೂಡಿಸಿದೆ. 2011. 2014. 2017 ಮತ್ತು 2020ರ ಕೆಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರಿ ಪ್ರಕ್ರಿಯೆಯನ್ನು ಪೂರ್ಣಿಗೊಳಿಸಿದ್ದು ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ 15 ಸಾವಿರ ಶಿಕ್ಷಕರ ನೇಮಕಾತಿಯನ್ನು ಮುಗಿಸಿದ್ದರು. ನಂತರ ಬಂದ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಕಳೆದರೂ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗಿಲ್ಲ.ಮೋದೀಜೀ ನೇತೃತ್ವದ ಕೇಂದ್ರ ಸರ್ಕಾರ 2022 ರಿಂದ 2025ರ ನಡುವೆ ರೋಜ್ಗಾರ್ ಯೋಜನೆ ಅಡಿಯಲ್ಲಿ 11 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದೆ. ಸ್ವತಹ ನರೇಂದ್ರ ಮೋದಿ ಅವರು ಜನವರಿ 2026ರಲ್ಲಿ 61,000 ಜನರಿಗೆ ಉದ್ಯೋಗ ಪತ್ರ ನೀಡಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಲಕ್ಷಾಂತರ ಜನರು ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಿ ಮತ್ತು ಡಿ ಕೆಟಗರಿ ನೌಕರರನ್ನು ಕಾಯಂ ಮಾಡಬೇಕಿದೆ. ಆರ್ ವಿ ದೇಶಪಾಂಡೆ ನೇತೃತ್ವದ ನಿಯೋಗ ಕಾಯಂ ಮಾಡುವ ಕುರಿತು ಮುಖ್ಯಮಂತ್ರಿಗಳಿಗೆ ವರದಿ ನೀಡಿ ಮೂರು ತಿಂಗಳು ಕಳೆದರೂ ಸರ್ಕಾರ ನೇಮಕಾತಿ ಪ್ರಾರಂಭಿಸಿಲ್ಲ. ರಾಜ್ಯ ಕಾಂಗ್ರೆಸ್ ಸಕಾ೯ರದ ಎಲ್ಲಸಕಾ೯ರಿ ಇಲಾಖೆ ಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಕಾ೯ರಿ ಆಸ್ಪತ್ರೆ ಗಳಿಗೆ ಅಗತ್ಯ ವಾದ ವೈದ್ಯಕೀಯ ಉಪಕರಣಗಳು ಮತ್ತು ನುರಿತ ವೈದ್ಯರುಗಳನ್ನು ನಿಯೋಜನೆ ಮಾಡದೆೇ ಸಾರ್ವಜನಿಕರು ಪರದಾಡುವಂತಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಜೂರಿಯಾದ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಎಲ್ಲಾ ಅಭಿವೃದ್ಧಿಯನ್ನು ತಾವೇ ಮಾಡಿದ್ದೇವೆ ಎಂದು ಸುಳ್ಳು ಹೇಳಿ ಜನರ ದಿಕ್ಕನ್ನು ತಪ್ಪಿಸುವಂತ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಂತ ಸಂದರ್ಭದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆ ಬಗ್ಗೆ ಹಾಗೂ ಜಿಲ್ಲೆಯ ಜನವಿರೋಧಿ ಯೋಜನೆಗಳ ಬಗ್ಗೆ ಕಿಂಚಿತ್ತು ಮಾತನಾಡದೆ ಇರುವುದು ವಿಷಾದನೀಯ ಸಂಗತಿಯಾಗಿದೆ.ಜಿಲ್ಲೆಯ ಉಸ್ತುವಾರಿ ಮಂತ್ರಿಗಳು ಹಾಗೂ ಅವರದೇ ಶಾಸಕರುಗಳು ತಮ್ಮ ನಾಯಕರಲ್ಲಿ ಏನೂ ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ ರಾಜ್ಯಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ.ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಹಾಗಾಗಿ ಸರ್ಕಾರ ಖಾಲಿ ಇರುವ ಸರ್ಕಾರಿ ನೌಕರರನ್ನು ತುಂಬುತ್ತಿಲ್ಲ. ಉದ್ಯೋಗ ಸೃಷ್ಟಿಯ ಬಗ್ಗೆ ದೇಶದಾದ್ಯಂತ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ರಾಹುಲ್ ಗಾಂಧಿ ಎಲ್ಲಿದ್ದಾರೆ ಎನ್ನುವುದನ್ನು ಪ್ರಶ್ನಿಸಬೇಕಾಗಿದೆ. ಅದಕ್ಕೆ ಅವರದೇ ಪಕ್ಷದ ನಾಯಕರು ಉತ್ತರಿಸಬೇಕಾಗಿದೆ. ಮಾನ್ಯ ಸಿದ್ದರಾಮಯ್ಯ ನವರು ತಮ್ಮ ಸರ್ಕಾರದ ವೈಫಲ್ಯ ವನ್ನು ಮುಚ್ಚಿ ಕೊಳ್ಳಲು ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿರುವುದು ತುಂಬಾ ವಿಷಾದನೀಯ ಸಂಗತಿಯಾಗಿದೆ ಎಂದು ಎನ್ ಎಸ್ ಹೆಗಡೆ ಹೇಳಿದ್ದಾರೆ.
