Banner Ad

ಸುದ್ದಿ ಕನ್ನಡ ವಾರ್ತೆ

ಕಾಳಿ ನದಿಯಿಂದ ಕೆರೆ/ಬಾಂದಾರುಗಳಿಗೆ ನೀರು ತುಂಬಿಸುವ ಯೋಜನೆ – ರೈತರ ಜೀವನಾಡಿ ಎಂದು ಶಾಸಕರು ಮತ್ತು ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷರು ಆಗಿರುವ ಆರ್ ವಿ ದೇಶಪಾಂಡೆ ಹೇಳುವ ಮೂಲಕ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ವಿವರ ಹೀಗಿದೆ

Banner Ad

ಹಳಿಯಾಳ ತಾಲೂಕಿನ 46 ಕೆರೆಗಳು ಹಾಗೂ 19 ಬಾಂದಾರಗಳಿಗೆ ಕಾಳಿ ನದಿಯಿಂದ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಈಗ ಅಂತಿಮ ಹಂತ ತಲುಪಿದೆ. ಅಗತ್ಯವಿರುವ ಎಲ್ಲಾ ಅನುಮತಿಗಳು ಪೂರ್ಣಗೊಂಡಿದ್ದು, ತಾಂತ್ರಿಕ ಕಾರ್ಯಗಳು ಸಮರ್ಪಕವಾಗಿ ಸಾಗುತ್ತಿವೆ. ಇಂತಹ ನಿರ್ಣಾಯಕ ಸಂದರ್ಭದಲ್ಲಿ ಅನಗತ್ಯ ಪ್ರತಿಭಟನೆಗಳು ಹಾಗೂ ಗೊಂದಲ ಸೃಷ್ಟಿಸುವ ಪ್ರಯತ್ನಗಳಿಂದ ಯೋಜನೆಯ ಸುಗಮ ಅನುಷ್ಠಾನದಲ್ಲಿ ಹಿನ್ನೆಡೆಯಾಗುವ ಸಾಧ್ಯತೆ ಇದೆ.

ಇಷ್ಟು ದಿನಗಳ ಕಾಲ ತಾಳ್ಮೆಯಿಂದ ಕಾಯುತ್ತಿರುವ ರೈತ ಬಂಧುಗಳು, ಯೋಜನೆ ಈಗ ಅಂತಿಮ ಹಂತದಲ್ಲಿರುವ ಈ ಸಂದರ್ಭದಲ್ಲಿ ವಿವೇಚನೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

ರೈತ ಬಾಂಧವರ ಸಹಕಾರದೊಂದಿಗೆ ಯೋಜನೆಯನ್ನು ಶೀಘ್ರ ಕಾರ್ಯಗತಗೊಳಿಸಿ ಲೋಕಾರ್ಪಣೆ ಮಾಡುವ ದಿಸೆಯಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ರೈತರ ಸಮೃದ್ಧಿಗಾಗಿ ಎಲ್ಲರೂ ಕೈಜೋಡಿಸೋಣ.
ಎಂದು ಹೇಳಿಕೆ ನೀಡಿದ್ದಾರೆ.

Banner Ad