Banner Ad

ಸುದ್ದಿ ಕನ್ನಡ ವಾರ್ತೆ

ಕಾರವಾರ:ಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಕಾರವಾರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.

Banner Ad

​ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು,ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಪ್ರತಿ ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಪರಿಣಾಮಕಾರಿಯಾಗಿ ತಲುಪುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

​ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯರುಗಳು,ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Banner Ad