ಸುದ್ದಿ ಕನ್ನಡ ವಾರ್ತೆ
ಹೊನ್ನಾವರ:ತಾಲೂಕಿನ ಗೇರುಸೊಪ್ಪಾದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಭೇಟಿ ನೀಡಿದರು.
ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ, ಕರ್ನಾಟಕ ರಾಜ್ಯದ ಹೆಮ್ಮೆಯ ಕಣ್ಮಣಿ ಕೆ.ಎಲ್. ರಾಹುಲ್ ತಾಲೂಕಿನ ಗೇರುಸೊಪ್ಪಾದ ಬಂಗಾರಮಕ್ಕಿಗೆ ದೇವಾಲಯಕ್ಕೆ ನೀಡಿ ದೇವರ ದರ್ಶನ ಪಡೆದು, ಆಶೀರ್ವಾದ ಪಡೆದರು.
ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು, ಆರಾಧ್ಯ ದೈವ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕ್ಷೇತ್ರದ ಧರ್ಮಧಿಕಾರಿ ಶ್ರೀ ಮಾರುತಿ ಗುರೂಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
