Banner Ad

ಸುದ್ದಿ ಕನ್ನಡ ವಾರ್ತೆ

ಭಟ್ಕಳ:ತಾಲೂಕಿನ ಹೆಬಳೆ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನ್ನೆಗದ್ದೆಯ ವೈಯುಕ್ತಿಕ ಕಾರಣಗಳಿಂದ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

Banner Ad

ಸಾವನ್ನಪ್ಪಿದ ವಿದ್ಯಾರ್ಥಿ ಕೌಶಿಕ ಸುಬ್ರಾಯ ನಾಯ್ಕ ಎಂದು ಗುರುತಿಸಲಾಗಿದೆ.ಓದಿನಲ್ಲಿ ಬುದ್ದಿವಂತನಾಗಿದ್ದ ಕೌಶಿಕ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು,ಶುಕ್ರವಾರ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿತ್ತು.ಆದರೆ ಹೊನ್ನೆಗದ್ದೆಯಲ್ಲಿರುವ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಯಾವುದೋ ವೈಯುಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ.

ಈ ಕುರಿತು ಮೃತ ವಿದ್ಯಾರ್ಥಿಯ ತಂದೆ ಸುಬ್ರಾಯ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು,ಪ್ರಕರಣ ದಾಖಲಾಗಿದೆ.

Banner Ad