Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಜೋಯಿಡಾ, ಶೈಕ್ಷಣಿಕ ಜಿಲ್ಲೆ ಶಿರಸಿ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರ,ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯ ಪೋಷಕ – ಶಿಕ್ಷಕರ ಮಹಾಸಭೆಯು 2025-26 ರ ದಿನಾಂಕ:07-03-2026 ರ ಶನಿವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.

Banner Ad

ಮಹಾಸಭೆಯ ಆರಂಭದಲ್ಲಿ ಶಿಂದೋಳಿ ಶಾಲೆಯ ಸಹ ಶಿಕ್ಷಕರಾದ ಆನಂದ ಪಿ. ಅವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರುನಾಥ ಮಾಜಾಳಕರ, ಉಪಾಧ್ಯಕ್ಷರಾದ ತನುಜಾ ಮಸೂರಕರ,ಸದಸ್ಯರು,ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ ನೇರವೇರಿಸಿದರು.

ಮಹಾಸಭೆಯ ಕುರಿತು ಪ್ರಾಸ್ತಾವಿಕ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡರವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು,ಮಕ್ಕಳ ಕಲಿಕಾ ಪ್ರಗತಿ,2026-27ನೇ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳು, ಶಾಲೆಯ ಭೌತಿಕ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ಯಾವ ಕ್ರಮಗಳು ತಗೆದುಕೊಳ್ಳಬೇಕು ಎಂಬುದರ ಕುರಿತು ಹಾಗೂ ಹಾಜರಾತಿ ಮತ್ತು ಶಾಲಾ ಅಭಿವೃದ್ಧಿಯ ಕುರಿತು ಚರ್ಚೆ,ಎಸ್ ಡಿ ಎಂ ಸಿ ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುವುದು ಈ ಸಭೆಯ ಮುಖ್ಯ ಉದ್ದೇಶ ಎಂದು ಹೇಳಿದರು. ಈ ಸಭೆಯಲ್ಲಿ ಕಲಿಕಾ ಪ್ರಗತಿ ಪರಿಶೀಲನೆಯಲ್ಲಿ ಮಕ್ಕಳ ಓದು-ಬರಹ,ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋಷಕರಿಗೆ ತಿಳಿಸಲಾಯಿತು.

ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ಕಲ್ಪಿಸುವಂತೆ ಪೋಷಕರಿಗೆ ಮನವರಿಕೆ.ಮಕ್ಕಳ ಪರೀಕ್ಷೆಯ ತಯಾರಿಯ ಕುರಿತು,ಶಾಲೆಯ ಮೂಲಭೂತ ಸೌಕರ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು,ಪಾಲಕರು,ಪೋಷಕರು ಭಾಗವಹಿಸಿದ್ದರು.ಶಿಕ್ಷಕಿಯಾದ ವಿದ್ಯಾ ಮೇಡಂ ಎಲ್ಲರಿಗೂ ವಂದನಾರ್ಪಣೆಯನ್ನು ಸಲ್ಲಿಸಿದರು.

Banner Ad