Banner Ad

ಸುದ್ದಿ ಕನ್ನಡ ವಾರ್ತೆ

ಹೊನ್ನಾವರ:ತಾಲೂಕಿನ ಅಳ್ಳಂಕಿ ಸಮೀಪ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ ಮಾರ್ಚ್ 8 ರ ತಡರಾತ್ರಿ ಸಂಭವಿಸಿದೆ.

Banner Ad

ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್, ರಾತ್ರಿ ಅಪಘಾತಕ್ಕೀಡಾಗಿದೆ. ಗೇರುಸೊಪ್ಪ ಸಮೀಪದ ಅಳ್ಳಂಕಿ ಫ್ಯಾಕ್ಟರಿ ಕ್ರಾಸ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಗಾಯಗೊಂಡವರನ್ನು ತಕ್ಷಣವೇ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Banner Ad