Banner Ad

ಸುದ್ದಿ ಕನ್ನಡ ವಾರ್ತೆ

ದಾಂಡೇಲಿ:ತಾಲೂಕಿನ ವ್ಯಾಪ್ತಿಯ ಆಲೂರ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Banner Ad

ಹಳಿಯಾಳ- ದಾಂಡೇಲಿ ರಸ್ತೆಯ ಆಲೂರ ಬಳಿ, ದಾಂಡೇಲಿಯಿಂದ ಹಳಿಯಾಳದ ಕಡೆ ಹೋಗುತ್ತಿದ್ದ ಕಾರು ಇದಾಗಿದ್ದು,ಮರಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಅಪಘಾತಗೊಂಡ ಬಗ್ಗೆ ಸ್ಥಳೀಯರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದ ನಂತರ,ತಕ್ಷಣ ಪೋಲಿಸ್ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದಿಂದ ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮೂಲಕ ಪ್ರಥಮ ಚಿಕಿತ್ಸೆಯನ್ನು ನೀಡಲಾಯಿತು.

ನಂತರ ಹೆಚ್ಚಿನ ಚಿಕಿತ್ಸೆಗೆಗಾಗಿ ಧಾರವಾಡ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ದಾಂಡೇಲಿಯ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Banner Ad