Banner Ad

ಸುದ್ದಿ ಕನ್ನಡ ವಾರ್ತೆ

ಮುಂಡಗೋಡ:ತಾಲೂಕಿನ ‌ಕಲಕೋಪ್ಪ ಕ್ರಾಸ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Banner Ad

ಅಪಘಾತದಲ್ಲಿ ಸಾವನ್ನಪ್ಪಿದ ಸವಾರ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದ ಎಲ್ಲಪ್ಪ ಎಸ್. ಕೊಡದ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಇದ್ದ ಸಹಸವಾರ ವಿಟ್ಟಲ್ ಎಸ್. ಚೋಳಪ್ಪನವ‌ರ್ ಗಂಭೀರವಾಗಿ ಗಾಯಗೊಂಡಿದ್ದು, ಅತನಿಗೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಇಬ್ಬರೂ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದವರಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಟಿಪ್ಪ‌ರ್ ನಡುವೆ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ.

ಈ ಮಾರ್ಗದಲ್ಲಿ ಟಿಪ್ಪರ್‌ ಲಾರಿಗಳ ಅತಿಯಾದ ಓಡಾಟದಿಂದ ವಾಹನ ಸವಾರರಿಗೆ ಅಪಾಯ ಹೆಚ್ಚಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದ್ದು,ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Banner Ad