Banner Ad

ಸುದ್ದಿ ಕನ್ನಡ ವಾರ್ತೆ
ಕಾರವಾರ: ಮಾ.18 ರಿಂದ
ನಡೆಯಲಿರುವ ಎಸ್ .ಎಸ್ .ಎಲ್.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಯಾಗಿರುವುದರಿಂದ, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು, ಅಂದರೆ ಮಾ.18 ರಿಂದ ಏಪ್ರಿಲ್ 2 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರವೇಶ ಪತ್ರ (Hall Ticket) ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ತಮ್ಮ ವಾಸಸ್ಥಾನಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪ ನಗರ, ಸಾಮಾನ್ಯ ಹಾಗೂ ವೇಗ ದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

Banner Ad
Banner Ad