ಸುದ್ದಿ ಕನ್ನಡ ವಾರ್ತೆ
ಕಾರವಾರ: ನಗರದ ಪ್ರಮುಖ
ರಸ್ತೆಗಳಲ್ಲಿ ಅತಿಕ್ರಮಣ ಮಾಡಿಕೊಂಡಿದ್ದ ಗೂಡಂಗಡಿಗಳ ವಿರುದ್ಧ ಕಾರವಾರ ನಗರಸಭೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು ವ್ಯಾಪಕ ತೆರವು ಕಾರ್ಯಾಚರಣೆ ನಡೆಸಿದರು.
ಸಾರ್ವಜನಿಕರಿಂದ ನಿರಂತರವಾಗಿ ಬಂದ ದೂರಿನ ಹಿನ್ನೆಲೆಯಲ್ಲಿ, ರಸ್ತೆ ಮೇಲೆ ಪ್ರಿಡ್ಜ್ ಸೇರಿದಂತೆ ವಿವಿಧ ವಸ್ತುಗಳನ್ನು ಇಟ್ಟು ಸಂಚಾರಕ್ಕೆ ಅಡಚಣೆ ಉಂಟುಮಾಡಲಾಗುತ್ತಿದೆ ಎಂಬ ಆರೋಪಗಳ ಮೇಲೆ ನಗರಸಭೆ ಸಿಬ್ಬಂದಿಗಳು ಕಾರ್ಯಾಚರಣೆಗೆ ಇಳಿದರು.
ಜೆಸಿಬಿ ಯಂತ್ರಗಳ ಸಹಾಯದಿಂದ ಪಿಕಳೆ ರಸ್ತೆ, ಎಂಜಿ ರಸ್ತೆ, ಗ್ರೀನ್ ಸ್ಟೀಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅತಿಕ್ರಮಣ ತೆರವುಗೊಳಿಸಲಾಯಿತು.
ರಸ್ತೆ ಮೇಲೆ ಇಡಲಾಗಿದ್ದ ಗೂಡಂಗಡಿ ವಸ್ತುಗಳನ್ನು ವಶಕ್ಕೆ ಪಡೆದು ತೆರವು ಮಾಡಲಾಗಿದ್ದು, ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಅಕ್ರಮ ಅತಿಕ್ರಮಣಗಳನ್ನು ಸಂಪೂರ್ಣವಾಗಿ
ತೆರವುಗೊಳಿಸಲಾಗಿದೆ. ಅಂಗಡಿಯವರಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ, ಬುಧವಾರ ಬೆಳಿಗ್ಗೆಯೇ ಕಾರ್ಯಾಚರಣೆ ಆರಂಭಿಸಿ ಯಾವುದೇ ಅಡಚಣೆ ಇಲ್ಲದೆ ಪೂರ್ಣಗೊಳಿಸಲಾಯಿತು.
ನಗರದಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲೂ ಇಂತಹ ತೆರವು ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
