ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ ವ್ಯಾಪ್ತಿಯ ಬಿರಂಪಾಲಿಯ ಶ್ರೀ ರಾಮಲಿಂಗ ದೇವರ ವಾರ್ಷಿಕೋತ್ಸವ ದಿನಾಂಕ:26-03-2026 ರ ಗುರುವಾರದಂದು ನಡೆಯಲಿದೆ. ವಾರ್ಷಿಕೋತ್ಸವದ ನಿಮಿತ್ತ ಶ್ರೀ ದೇವರ ತೊಟ್ಟಿಲು ಕಾರ್ಯಕ್ರಮ ಬೆಳಿಗ್ಗೆ 9:00 ಗಂಟೆಗೆ ಹಾಗೂ 10:30 ಕ್ಕೆ ಅಭಿಷೇಕ ಹಾಗೂ ಸತ್ಯನಾರಾಯಣ ಮಹಾಪೂಜೆಯ ನಂತರ ಮಹಾಪ್ರಸಾದ. ಎಲ್ಲಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ. ರಾತ್ರಿ 10:00 ಗಂಟೆಗೆ ಸವಾಲ್ ಕಾರ್ಯಕ್ರಮ,ಲಾಟರಿ ಡ್ರಾ,ಸಣ್ಣ ಮಕ್ಕಳ ಮನರಂಜನಾ ಕಾರ್ಯಕ್ರಮ ಮತ್ತು ಕೊಲ್ಲಾಪುರ ತಂಡದಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಇರುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಹಕುಟುಂಬ,ಪರಿವಾರ ಸಮೇತ ಆಗಮಿಸುವ ಮೂಲಕ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ರಾಮಲಿಂಗ ನಾಟ್ಯ ಕಮಿಟಿ ಹಾಗೂ ಊರ ನಾಗರೀಕರು ವಿನಂತಿಸಿಕೊಂಡಿದ್ದಾರೆ.