Banner Ad

ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ಹಳಿಯಾಳ ಎಪಿಎಂಸಿ ವತಿಯಿಂದ ಗ್ರೀನ್ ಎಕರ್ಸ್ ಸೊಸೈಟಿ ಸಹಯೋಗದಲ್ಲಿ ಜೋಯಿಡಾದಲ್ಲಿ ನಿರ್ಮಿಸಲಾದ ಎಪಿಎಂಸಿ ಉಪಪ್ರಾಂಗಣವನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ- ಜೋಯಿಡಾ ಶಾಸಕರಾದ ಆ‌ರ್.ವಿ. ದೇಶಪಾಂಡೆ ಅವರು ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಉಪಪ್ರಾಂಗಣದಿಂದ ಜೋಯಿಡಾ ಭಾಗದ ರೈತರಿಗೆ ಹೆಚ್ಚಿನ ಅನುಕೂಲ ಸಿಗಲಿದೆ. ಅಡಿಕೆ, ತೆಂಗು, ಜೇನು, ಕಾಳುಮೆಣಸು ಸೇರಿದಂತೆ ವಿವಿಧ ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ರೈತರ ಆರ್ಥಿಕ ಸ್ಥಿತಿಗೂ ಬಲ ದೊರೆಯಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರವಿ ರೆಡ್ಕರ್ ಅವರ ಮುಂದಾಳತ್ವದಲ್ಲಿ ಈ ಕಾರ್ಯ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

Banner Ad

ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಕೃಷ್ಣಾ ದೇಸಾಯಿ ಫಣಸೋಲಿ, ಜಿಲ್ಲಾ ಪಂಚಾಯಿತ ಮಾಜಿ ಸದಸ್ಯ ರಮೇಶ ನಾಯ್ಕ, ಕೆಪಿಸಿಸಿ ಸದಸ್ಯ ಸದಾನಂದ ದಬ್ಗಾರ, ಬ್ಲಾಕ್ ಅಧ್ಯಕ್ಷ ಮಾರುತಿ ಗಾವಡೆ, ಸಂಜಯ ಹಣಬರ, ರವಿ ರೆಡ್ಕರ್, ಸುನೀಲ್ ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Banner Ad