ಸುದ್ದಿ ಕನ್ನಡ ವಾರ್ತೆ
ಜೋಯಿಡಾ ತಾಲೂಕಿನ ಉಳವಿಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಶಾರದಾ ರಾಥೋಡ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಮಹಿಳಾ ಸಮಾಲೋಚನಾ ಸಭೆ ನಡೆಯಿತು.

ಉಳವಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಮೋಕಾಶಿ ಮಾತನಾಡಿ ತಾಲೂಕಿನಲ್ಲಿ ಮತ್ತು ನಮ್ಮ ಉಳವಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಾಗಿದ್ದಾರೆ,ಮಾನ್ಯ ಶಾಸಕಾರದ ಆರ್ ವಿ ದೇಶಪಾಂಡೆ ಅವರ ಮಾರ್ಗದರ್ಶನದಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದೇವೆ, ಈಗಾಗಲೇ ರಸ್ತೆ,ವಿದ್ಯುತ್, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಕ್ಕೆ ಆರ್ ವಿ ದೇಶಪಾಂಡೆ ಅವರು ಮಹತ್ವ ನೀಡಿ ತಾಲೂಕನ್ನು ಅಭಿವೃದ್ಧಿ ಪಡಿಸಿದ್ದಾರೆ, ಕಾಂಗ್ರೆಸ್ ಪಕ್ಷದ ಏಳಿಗೆಗೆ ಅವರೆ ಕಾರಣರಾಗಿದ್ದಾರೆ ಎಂದರು.

ತಾಲೂಕು ಬ್ಲಾಕ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುಕನ್ಯಾ ದೇಸಾಯಿ ಮಾತನಾಡಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಮೂಲಕ ಮಹಿಳೆಯರಿಗೆ ಸಹಾಯ ಮಾಡಿದೆ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಹೆಚ್ಚಿನ ಬೆಂಬಲ ನೀಡಬೇಕು ,ಕಾಂಗ್ರೆಸ್ ಪಕ್ಷವನ್ನು ಬೆಳೆಸಬೇಕು ಎಂದರು‌.

ಗ್ಯಾರಂಟಿ ಯೋಜನೆ ಸದಸ್ಯ ರಮೇಶ ಪಡಸಲಗಿ ಮಾತನಾಡಿ ಗ್ಯಾರಂಟಿ ಯೋಜನೆ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ಮನೆಮಾತಾಗಿದೆ, ಈಗಿನ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಂಜುಳಾ ವಸ್ರ್ತದ, ಲಕ್ಷ್ನೀ ,ಗೌರವ್ವ, ರಂಜನಾ ಹುಬ್ಬಳ್ಳಿ,ಸುಧಾ ದೇವಳಿ, ಸೈನಾಜ್ ,ಮಂಗಲಾ ಉಪಾಧ್ಯ ಇತರರು ಇದ್ದರು.