ಸುದ್ದಿ ಕನ್ನಡ ವಾರ್ತೆ
ಬನವಾಸಿ: ಇಲ್ಲಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾಸ್ಯಂದನ ರಥೋತ್ಸವ ಮಾ. 29 ಹಾಗೂ ಮಾ. 30ರಂದು ಜರುಗಲಿದೆ. ಮಾ. 29ರಂದು ಸಂಜೆ ಗಜ ಯಂತ್ರೋತ್ಸವ(ಹೂವಿನ ತೇರು) ನಡೆಯುವುದು.
ಮಾ. 30ರಂದು ಮುಂಜಾನೆ ಉಮಾಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಪಲ್ಲಕ್ಕಿ ಉತ್ಸವದ ಬಳಿಕ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಭಕ್ತರ ದರ್ಶನಕ್ಕಾಗಿ ಅವಕಾಶ ನೀಡಲಾಗುತ್ತದೆ. ರಾತ್ರಿ 12ಗಂಟೆಗೆ ವಾರ್ಷಿಕ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ. 417 ವರ್ಷಗಳ ಇತಿಹಾಸ ಹೊಂದಿರುವ ಈ ಮಹಾ ರಥೋತ್ಸವಕ್ಕೆ ರಾಜ್ಯದಿಂದ ಮಾತ್ರವಲ್ಲದೇ ಹೊರ ರಾಜ್ಯದಿಂದಲೂ ಭಕ್ತರು ಆಗಮಿಸಿ ಸಂಭ್ರಮಿಸುತ್ತಾರೆ.
