ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಅರಬೈಲ್ ಘಟ್ಟದ ತಿರುವಿನಲ್ಲಿ ರಸ್ತೆಯ ಬಲಬದಿಯ ಗಟಾರದಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
