ಸುದ್ದಿ ಕನ್ನಡ ವಾರ್ತೆ
ಭಟ್ಕಳ: ನಗರ ಠಾಣೆಯ ಪಿಎಸ್‌ಐ ನವೀನ್ ಎಸ್. ನಾಯ್ಕ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿಯವರ ಪದಕ ನಿಯಮಗಳಲ್ಲಿ ನಿಗದಿಪಡಿಸಿರುವ ಎಲ್ಲಾ ಷರತ್ತುಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯಲ್ಲಿನ ಅವರ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆಗಾಗಿ ಈ ಪದಕ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ.
ಪ್ರಶಸ್ತಿ ಪುರಸ್ಕೃತರು: ನವೀನ್ ಎಸ್. ನಾಯ್ಕ, ಪಿಎಸ್‌ಐ, ಭಟ್ಕಳ ನಗರ ಠಾಣೆ.
ಸಾಧನೆ: ಭಟ್ಕಳದಲ್ಲಿ ದಕ್ಷ ಕಾರ್ಯನಿರ್ವಹಣೆ ಮತ್ತು ಡ್ರಗ್ಸ್ ಜಾಲದ ವಿರುದ್ಧದ ಕಾರ್ಯಾಚರಣೆ.
ಹಿನ್ನೆಲೆ: ಕುಮಟಾ, ಗೋಕರ್ಣ ಠಾಣೆಗಳಲ್ಲೂ ಕರ್ತವ್ಯ ನಿರ್ವಹಿಸಿದ ಅನುಭವ.
ಈ ಹಿಂದೆ, ನಾಗಪ್ಪ ಎಂಬುವವರು ಕೂಡ ಉತ್ತರಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದರು.
