Banner Ad

ಸುದ್ದಿ ಕನ್ನಡ ವಾರ್ತೆ
​ಹೊನ್ನಾವರ: ನಗರದ ಬಸ್‌ ನಿಲ್ದಾಣದ ಬಳಿ ಇರುವ ಯು.ಕೆ. ಸಹಕಾರಿ ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಬೆಂಕಿಯ ಅಬ್ಬರಕ್ಕೆ ಬ್ಯಾಂಕ್ ಕಟ್ಟಡಕ್ಕೆ ಹಾನಿಯಾಗಿದ್ದು, ಪ್ರಮುಖ ಕಡತ ಪತ್ರಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬ್ಯಾಂಕ್‌ನ ಲಾಕರ್‌ನಲ್ಲಿ ಹಣವಿದ್ದು, ಎಷ್ಟು ಪ್ರಮಾಣದ ನಗದು ಹಾನಿಯಾಗಿದೆ ಎಂಬ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Banner Ad
Banner Ad