ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಶಿಂದೋಳಿ ಗ್ರಾಮದ ಸಾರ್ವಜನಿಕರು ಸತತ 24 ವರ್ಷಗಳಿಂದ ಆಚರಿಸುತ್ತಾ ಬಂದಿದ್ದು, ಈ ವರ್ಷ 25 ನೇಯ ವರ್ಷದ ಸಾರ್ವಜನಿಕ ಗಣೇಶೋತ್ಸವ. ಪ್ರತಿ ದಿನವೂ ಗ್ರಾಮದ ಗ್ರಾಮಸ್ಥರು ಧಾರ್ಮಿಕ, ಸಾಂಸ್ಕೃತಿಕ,ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದಾರೆ.

 

ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಆಚರಣೆಯು ಲೋಕಮಾನ್ಯ ಬಾಲಗಂಗಾಧರ ತಿಲಕರ ಆದರ್ಶಕ್ಕೆ ಪ್ರೇರಣೆಯಾಗಿದೆ. ಈ ಭಾಗದಲ್ಲಿ ಉತ್ತಮ ರೀತಿಯಲ್ಲಿ ವಿನೂತನವಾಗಿ, ಸಂಘಟನಾತ್ಮಕವಾಗಿ ಗ್ರಾಮಸ್ಥರು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವುದು ಒಳ್ಳೆಯ ಬೆಳವಣಿಗೆ ಎಂದು ಶಿಂದೋಳಿ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡರವರು ತಮ್ಮ ಅಭಿಪ್ರಾಯವನ್ನು ಮಾಧ್ಯಮಕ್ಕೆ ವ್ಯಕ್ತಪಡಿಸಿದ್ದಾರೆ.